ಬೆಳಗಾವಿ: ‘ರಾಜ್ಯ ಸರ್ಕಾರದಲ್ಲಿ ಎಲ್ಲವೂ ನಾಜೂಕಿನಿಂದ ನಡೆದಿದೆ. ಯಾವುದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
‘ಸಿದ್ದರಾಮಯ್ಯ ಅವರನ್ನು ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹುನ್ನಾರ ನಡೆಸಿಲ್ಲ. ತಪ್ಪು ಮಾಡಿದವರ ರಾಜೀನಾಮೆ ಕೇಳುತ್ತಿದ್ದೇವೆ. ತಪ್ಪು ಮಾಡಿಲ್ಲವೆಂದರೆ ಹೆದರಬೇಕಿಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
‘ಸಿದ್ದರಾಮಯ್ಯ ಅವರು ತಪ್ಪು ಮಾಡಿರದಿದ್ದರೆ, ಸದನದಲ್ಲಿ ಹಗರಣದ ಚರ್ಚೆಗೆ ಅವಕಾಶ ಕೊಡಬೇಕಿತ್ತು. ಬಿಜೆಪಿಯನ್ನು ಎದುರಿಸಲು ಆಗಲಿಲ್ಲ. ಸಭಾಧ್ಯಕ್ಷರ ಮೂಲಕ ಚರ್ಚೆಗೆ ನಿರ್ಬಂಧ ಹೇರಿದರು. ಪತ್ರಿಕೆಗಳಲ್ಲಿ ಪುಟಗಟ್ಟಲೇ ಜಾಹೀರಾತು ನೀಡಿ, ತಮ್ಮ ಅಕ್ರಮ ಮುಚ್ಚಿಟ್ಟುಕೊಳ್ಳಲು ಪ್ರಯತ್ನ ನಡೆಸಿದ್ದಾರೆ’ ಎಂದು ಅವರು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.