ADVERTISEMENT

ಕಾಂಗ್ರೆಸ್‌ ಸರ್ಕಾರದಿಂದ ಹಗರಣ ಮುಚ್ಚಿಹಾಕುವ ಕೆಲಸ: ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 11:39 IST
Last Updated 11 ಜೂನ್ 2025, 11:39 IST
   

ಬೆಳಗಾವಿ: ‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ತನ್ನ ಅವಧಿಯಲ್ಲಿ ಆಗಿರುವ ಹಗರಣಗಳನ್ನು ಮುಚ್ಚಿಹಾಕುವ ಕೆಲಸ ಮಾಡುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ದೂರಿದರು.

ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಸಚಿವರು ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಬಿ.ನಾಗೇಂದ್ರ, ಹಗರಣದಲ್ಲಿ ಸಿಲುಕಿ ಬಂಧಿಸಲ್ಪಟ್ಟರು. ಬಳಿಕ ಜಾಮೀನಿನ ಮೇಲೆ ಅವರು ಹೊರಬಂದಿದ್ದು, ತನಿಖೆ ನಡೆಯುತ್ತಿದೆ. ಈ ಮಧ್ಯೆ, ಅವರನ್ನು ಮತ್ತೆ ಸಚಿವರನ್ನಾಗಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳುತ್ತಿರುವುದನ್ನು ಗಮನಿಸಿದರೆ, ಸರ್ಕಾರದಿಂದ ಹಗರಣಗಳನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ’ ಎಂದು ದೂರಿದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ, ಬೇರೆ ಬೇರೆ ಖಾತೆಗೆ ಹಣ ವರ್ಗಾವಣೆಯಾಗಿದೆ. ಪ್ರಾಥಮಿಕವಾಗಿ ಈ ಹಗರಣ ನಡೆದಿರುವುದು ದೃಢಪಟ್ಟಿದೆ. ಆದರೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ’ ಎಂದು ಪುನರುಚ್ಚರಿಸಿದರು. 

ADVERTISEMENT

ಕಾಂಗ್ರೆಸ್‌ನ ಮೂವರು ಶಾಸಕರ ಮನೆ ಮೇಲೆ ಇ.ಡಿ ದಾಳಿ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್‌, ‘ಮಾಹಿತಿ ಆಧರಿಸಿ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದರಲ್ಲಿ ಯಾವುದೇ ರಾಜಕಾರಣ ಇಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.