ADVERTISEMENT

ಜೈನಮುನಿ ಹತ್ಯೆ ಪ್ರಕರಣ: 3ನೇ ದಿನವೂ ಮುಂದುವರಿದ ತನಿಖೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2023, 14:39 IST
Last Updated 26 ಜುಲೈ 2023, 14:39 IST
ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ಜೈನಮುನಿ ಹತ್ಯೆ ಪ್ರಕರಣ ತನಿಖೆ ಕೈಗೊಂಡಿರುವ ಸಿಐಡಿ ತಂಡ ಬುಧವಾರ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು
ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ಜೈನಮುನಿ ಹತ್ಯೆ ಪ್ರಕರಣ ತನಿಖೆ ಕೈಗೊಂಡಿರುವ ಸಿಐಡಿ ತಂಡ ಬುಧವಾರ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು   

ಚಿಕ್ಕೋಡಿ: ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಕೈಗೊಂಡಿರುವ ಅಪರಾಧ ತನಿಖಾ ದಳ ಅಧಿಕಾರಿಗಳು ಬುಧವಾರವೂ ಹಿರೇಕೋಡಿ ನಂದಿ ಪರ್ವತ ಹಾಗೂ ರಾಯಬಾಗ ತಾಲ್ಲೂಕಿನ ಖಟಕಭಾವಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬುಧವಾರ ಸಿಐಡಿ ಮತ್ತು ಐಎಫ್ಸಿಎಲ್ ತಂಡದ ಅಧಿಕಾರಿಗಳು ಜೈನ ಮುನಿ ಹತ್ಯೆಯಾಗಿರುವ ಹಿರೇಕೋಡಿಯ ನಂದಿ ಪರ್ವತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತದನಂತರ ಜೈನಮುನಿಯನ್ನು ಹತ್ಯೆಗೈದು ಶವವನ್ನು ತುಂಡರಿಸಿ ಎಸೆಯಲಾಗಿದ್ದ ಖಟಕಬಾವಿಯ ಕೊಳವೆಬಾವಿಯ ಬಳಿ ಪರಿಶೀಲಿಸಿದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT