ಬೆಳಗಾವಿ: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು’ ಎಂದು ಒತ್ತಾಯಿಸಿ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
‘ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಬೆನ್ನಲ್ಲೇ, ಅವರು ಮುಖ್ಯಮಂತ್ರಿ ಸ್ಥಾನ ತೊರೆದು ಪ್ರಕರಣದ ವಿಚಾರಣೆಗೆ ಸಹಕರಿಸಬೇಕಿತ್ತು. ಆದರೆ, ನಿಯಮವನ್ನೆಲ್ಲ ಗಾಳಿಗೆ ತೂರಿ ಮೊಂಡುತನ ಪ್ರದರ್ಶಿಸುತ್ತಿದ್ದಾರೆ’ ಎಂದು ದೂರಿದರು.
ಈ ಸಂಬಂಧ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.