ADVERTISEMENT

ಬೆಳಗಾವಿ: ಮುಖ್ಯಶಿಕ್ಷಕ ವೀರಣ್ಣ ಬೆಂಬಲಕ್ಕೆ ಜೆಡಿಎಸ್

​ಪ್ರಜಾವಾಣಿ ವಾರ್ತೆ
Published 31 ಮೇ 2025, 15:55 IST
Last Updated 31 ಮೇ 2025, 15:55 IST
ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಅವರ ಅಮಾನತು ಕ್ರಮ ಖಂಡಿಸಿ ಜೆಡಿಎಸ್‌ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌
ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಅವರ ಅಮಾನತು ಕ್ರಮ ಖಂಡಿಸಿ ಜೆಡಿಎಸ್‌ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌   

ಬೆಳಗಾವಿ: ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ ನಡೆಸಿದ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಅವರ ಅಮಾನತು ಮಾಡಿದ ಕ್ರಮಕ್ಕೆ ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದ ಫೇಸ್‌ಬುಕ್‌ ಖಾತೆಯಲ್ಲಿ ‘ಪ್ರಜಾವಾಣಿ’ ವರದಿಗಳನ್ನು ಹಂಚಿಕೊಂಡು ಸರ್ಕಾರದ ವಿರುದ್ಧ ಕಿಡಿ ಕಾರಿದೆ.

‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ! ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಸರ್ಕಾರ ಒಂದು ಕಡೆ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ. ಮತ್ತೊಂದು ಕಡೆ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಶಾಲಾ ಮಕ್ಕಳಿಗೆ ಕೊಠಡಿಗಳನ್ನು ಕೊಡಿ ಎಂದು ಆಗ್ರಹಿಸಿದ್ದಕ್ಕೆ ಮುಖ್ಯ ಶಿಕ್ಷಕರಿಗೆ ಅಮಾನತು ಶಿಕ್ಷೆ ವಿಧಿಸಿರುವ ‘ಹಿಟ್ಲರ್‌ ಸರ್ಕಾರ’ ಎಂದೂ ಪೋಸ್ಟ್‌ನಲ್ಲಿ ದೂರಲಾಗಿದೆ.

‘ಶಾಲೆಗೆ ಕೊಠಡಿ ಕೇಳುವುದು ಮಹಾಪರಾಧವೇ ಸಚಿವ ಮಧು ಬಂಗಾರ‍ಪ್ಪ ಅವರೇ? ಶಿಕ್ಷಣ ಸಚಿವರಾಗಿ ನಿಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದ್ದರೆ ಆ ಮುಖ್ಯ ಶಿಕ್ಷಕ ಶಾಲಾ ಮಕ್ಕಳಿಗಾಗಿ ಕಾಲ್ನಡಿಗೆ ಜಾಥಾ ಏಕೆ ಮಾಡುತ್ತಿದ್ದರು? ರಾಜ್ಯ ಸರ್ಕಾರ ಈ ಕೂಡಲೇ ಮುಖ್ಯ ಶಿಕ್ಷಕರಾದ ವೀರಣ್ಣ ಅವರ ಅಮಾನತು ಆದೇಶವನ್ನು ರದ್ದುಪಡಿಸಬೇಕು ಹಾಗೂ ಆ ಶಾಲೆಯ ಮಕ್ಕಳ ಶಿಕ್ಷಣಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡಬೇಕು’ ಎಂದೂ ಆಗ್ರಹಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.