ADVERTISEMENT

ಮಹದಾಯಿ ಅನುಷ್ಠಾನಕ್ಕೆ ಜೆಡಿಎಸ್‌ ಹೋರಾಟ 16ರಂದು

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 13:15 IST
Last Updated 14 ಏಪ್ರಿಲ್ 2022, 13:15 IST

ಬೆಳಗಾವಿ: 'ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜೆಡಿಎಸ್ ವತಿಯಿಂದ ಮಲಪ್ರಭಾ ನದಿಯ ಉಗಮ ಸ್ಥಾನವಾದ ಖಾನಾಪುರ ತಾಲ್ಲೂಕಿನ ಕಣಕುಂಬಿಯಲ್ಲಿ ಏ.16ರಂದು ಹೋರಾಟಕ್ಕೆ ಚಾಲನೆ ನೀಡಲಾಗುವುದು. ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸೇರಿದಂತೆ ಮುಖಂಡರು ಭಾಗವಹಿಸಲಿದ್ದಾರೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಯಾದ ಮಹಾದಾಯಿ, ಕಳಸಾ ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲೆಯಾದ್ಯಂತ ‘ಜನತಾ ಜಲಧಾರೆ ರಥಯಾತ್ರೆ’ ನಡೆಸಲಾಗುವುದು’ ಎಂದರು.

‘ರಾಜ್ಯದಲ್ಲಿ ನನೆಗುದ್ದಿಗೆ ಬಿದ್ದಿರುವ ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಪಕ್ಷದಿಂದ ಹೋರಾಟ ನಡೆಸಲಾಗುತ್ತಿದೆ’ ಎಂದರು.

ADVERTISEMENT

‘ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಚುನಾವಣೆಗೂ ಮುನ್ನ ಭರವಸೆ ನೀಡಿದ್ದರು. ಆದರೆ, ಭರವಸೆ ಈಡೇರಿಸುವಲ್ಲಿ ವಿಫಲವಾಗಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್‌ ನಾಯಕರಿಗೂ ಬದ್ಧತೆ ಇಲ್ಲ’ ಎಂದು ಹೇಳಿದರು.

ಜಿಲ್ಲಾ ಘಟಕದ ಪ್ರಧಾನ‌ ಕಾರ್ಯದರ್ಶಿ ಈರಣ್ಣ ರೇವಡಿ, ವಕ್ತಾರ ಬಿ.ಎಸ್.ರುದ್ರಗೌಡರ, ನಗರ ಘಟಕದ ಅಧ್ಯಕ್ಷ ಪ್ರಮೋದ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.