ADVERTISEMENT

ಜೆಡಿಎಸ್‌ನಿಂದ ಎಲ್ಲ ವಾರ್ಡ್‌ಗಳಲ್ಲೂ ಸ್ಪರ್ಧೆ: ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 16:31 IST
Last Updated 18 ಆಗಸ್ಟ್ 2021, 16:31 IST
ಶಂಕರ ಮಾಡಲಗಿ
ಶಂಕರ ಮಾಡಲಗಿ   

ಬೆಳಗಾವಿ: ‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ 58 ವಾರ್ಡ್‌ಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ‌ ತಿಳಿಸಿದರು.

ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಬೆಳಗಾವಿ ಅಭಿವೃದ್ಧಿಗೆ ಕುಮಾರಸ್ವಾಮಿ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದನ್ನು ಜನರ ಗಮನಕ್ಕೆ ತಂದು ಪ್ರಚಾರ ಮಾಡಲಾಗುವುದು’ ಎಂದು ತಿಳಿಸಿದರು.

‘ನಮ್ಮ ಸರ್ಕಾರವಿದ್ದಾಗ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲಾಗಿತ್ತು. ಬಳಿಕ ಬಂದ ಬಿಜೆಪಿ ಸರ್ಕಾರ ಅಧಿವೇಶನ ನಡೆಸಿಲ್ಲ. ಇದೆಲ್ಲವನ್ನೂ ತಿಳಿಸಲಾಗುವುದು. ಪ್ರಚಾರಕ್ಕೆ ಪಕ್ಷದ ವರಿಷ್ಠರು ಬೆಳಗಾವಿಗೆ ಬರುತ್ತಾರೆ‌’ ಎಂದು ಹೇಳಿದರು.

ADVERTISEMENT

ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಪ್ರಮೋದ ಪಾಟೀಲ,‌ ಜಿಲ್ಲಾ ಘಟಕದ ಕಾರ್ಯದರ್ಶಿ ಈರಣ್ಣ ರೇವಡಿ, ಮುಖಂಡರಾದ ಭೀಮಪ್ಪ ಗಡಾದ, ಪಿ.ಎಫ್.ಪಾಟೀಲ,‌ ಬಿ.ಎಸ್. ರುದ್ರಗೌಡರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.