
ವೀರಭದ್ರಪ್ಪ ಹಾಲಹರವಿ
ಬೆಳಗಾವಿ: ‘ಇಲ್ಲಿನ ಗಾಂಧಿ ಭವನದಲ್ಲಿ ಜಾತ್ಯತೀತ ಜನತಾದಳವು (ಜೆಡಿಎಸ್) ಫೆ.22ರಂದು ಯುವ ಸಮಾವೇಶ ಆಯೋಜಿಸಿದ್ದೇವೆ. ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ಭಾಗವಹಿಸುವರು’ ಎಂದು ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವೀರಭದ್ರಪ್ಪ ಹಾಲಹರವಿ ಹೇಳಿದರು.
ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷ ಸಂಘಟನೆ ಮತ್ತು ಯುವಜನರನ್ನು ಪಕ್ಷದತ್ತ ಸೆಳೆಯುವ ನಿಟ್ಟಿನಲ್ಲಿ ಸಮಾವೇಶ ಸಂಘಟಿಸಿದ್ದೇವೆ. ಸಿಪಿಇಡಿ ಮೈದಾನದಿಂದ ಗಾಂಧಿ ಭವನದವರೆಗೆ ಬೈಕ್ ರ್‍ಯಾಲಿ ನಡೆದ ನಂತರ, ಬೆಳಿಗ್ಗೆ 11ಕ್ಕೆ ಸಮಾವೇಶ ಆರಂಭಗೊಳ್ಳಲಿದೆ’ ಎಂದರು.
‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ಮಾಡಿದ ಸಾಧನೆಗಳು ಮತ್ತು ಜಾರಿಗೆ ತಂದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸಮಾವೇಶದಲ್ಲಿ ತಿಳಿಸುತ್ತೇವೆ’ ಎಂದು ತಿಳಿಸಿದರು.
‘ಇತ್ತೀಚೆಗೆ ನಡೆದ ಜೆಡಿಎಸ್ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಜನರು ಸೇರಿದ್ದರು. ಫೆ.27ರಂದು ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಜಿಲ್ಲೆಗಳ ವ್ಯಾಪ್ತಿಯ ಸಮಾವೇಶವೂ ನಡೆಯಲಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.