
ಚಿಕ್ಕೋಡಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮುಂತಾದವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿ ಕೃಷ್ಣಾ, ವೇದಗಂಗಾ, ಘಟಪ್ರಭಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ಶನಿವಾರ ಮನವಿ ಮಾಡಿದರು.
ರಾಜ್ಯದಲ್ಲಿ ಮಳೆ ಇಲ್ಲದದ್ದರಿಂದ ಕೂಡಲೇ ಕೃಷ್ಣಾ ಹಾಗೂ ಉಪನದಿಗಳಿಗೆ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಬೇಕು ಎಂದು ವಿನಂತಿಸಿಕೊಂಡರು.
ಬೆಳಗಾವಿಯಿಂದ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ನೇತೃತ್ವದಲ್ಲಿ ತೆರಳಿದ ನಿಯೋಗಕ್ಕೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಕ್ಷಣವೇ ನೀರು ಬಿಡುವ ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.