ADVERTISEMENT

ಅಂಗಡಿ ಕುಟುಂಬಕ್ಕೆ ಜೋಶಿ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 10:58 IST
Last Updated 6 ಅಕ್ಟೋಬರ್ 2020, 10:58 IST
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಈಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಕುಟುಂಬದವರಿಗೆ ಮಂಗಳವಾರ ಸಾಂತ್ವನ ಹೇಳಿದರು
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಈಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಕುಟುಂಬದವರಿಗೆ ಮಂಗಳವಾರ ಸಾಂತ್ವನ ಹೇಳಿದರು   

ಬೆಳಗಾವಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಈಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಮನೆಯಲ್ಲಿ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಶ್ರದ್ಧಾ ಹಾಗೂ ಸ್ಫೂರ್ತಿ ಅವರಿಗೆ ಧೈರ್ಯ ತುಂಬಿದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಪಕ್ಷದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT