ADVERTISEMENT

ಬೆಳಗಾವಿ: ಕೋವಿಡ್ ಲಸಿಕೆಗೆ ಆಗ್ರಹಿಸಿ ಕರವೇ ‍‍‍ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 17:28 IST
Last Updated 10 ಜೂನ್ 2021, 17:28 IST
‘ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ’ ಎಂದು ಸರ್ಕಾರವನ್ನು ಒತ್ತಾಯಿಸಿ ಕರವೇ ಮುಖಂಡರು ಹಾಗೂ ಕಾರ್ಯಕರ್ತರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
‘ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ’ ಎಂದು ಸರ್ಕಾರವನ್ನು ಒತ್ತಾಯಿಸಿ ಕರವೇ ಮುಖಂಡರು ಹಾಗೂ ಕಾರ್ಯಕರ್ತರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ’ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)ಯಿಂದ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ರಾಜ್ಯದಲ್ಲಿ ಅರ್ಹರೆಲ್ಲರಿಗೂ ಜೂನ್ ಅಂತ್ಯದೊಳಗೆ ಮೊದಲನೇ ಡೋಸ್ ಕೋವಿಡ್ ಲಸಿಕೆ ಮತ್ತು ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ಉಚಿತವಾಗಿ ನೀಡಬೇಕು. ಅಲ್ಲಲ್ಲಿ ಲಸಿಕೆ ಬೂತ್‌ಗಳನ್ನು ಸ್ಥಾಪಿಸಿ ಜನರನ್ನು ಕಾಯಿಸದೆ, ಸತಾಯಿಸದೆ ಲಸಿಕೆ ನೀಡಬೇಕು ಎನ್ನುವುದು ವೇದಿಕೆಯ ಹಕ್ಕೊತ್ತಾಯವಾಗಿದೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ತಿಳಿಸಿದರು.

ರಾಜ್ಯ ಸಂಚಾಲಕ ಮಹಾದೇವ ತಳವಾರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.