ADVERTISEMENT

ಅವೈಜ್ಞಾನಿಕ ಚರಂಡಿ ಕಾಮಗಾರಿ: ಆರೋಪ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2023, 14:01 IST
Last Updated 24 ಆಗಸ್ಟ್ 2023, 14:01 IST
ಗೋಕಾಕದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರಸಭೆ ಪೌರಾಯುಕ್ತ ಎಸ್.ಎ.ಮಹಾಜನ ಅವರಿಗೆ ಮನವಿ ಸಲ್ಲಿಸಿದರು
ಗೋಕಾಕದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರಸಭೆ ಪೌರಾಯುಕ್ತ ಎಸ್.ಎ.ಮಹಾಜನ ಅವರಿಗೆ ಮನವಿ ಸಲ್ಲಿಸಿದರು   

ಗೋಕಾಕ: ನಗರದ ನಾಕಾ ನಂ.1ರಿಂದ ಡಿವೈಎಸ್‌ಪಿ ಕಚೇರಿವರೆಗೆ  ನಿರ್ಮಾಣವಾಗುತ್ತಿರುವ ಚರಂಡಿ ಮತ್ತು ಪಾದಚಾರಿ ಮಾರ್ಗ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಅದನ್ನು ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೌರಾಯುಕ್ತ ಎಸ್.ಎ. ಮಹಾಜನ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ವಿವಿಧೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಜನರ ಮೇಲೆ ನಾಯಿಗಳು ದಾಳಿ ಮಾಡುತ್ತಿವೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ನಗರಸಭೆಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈ ಬಗ್ಗೆಯೂ ಕ್ರಮ ವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕರವೇ ತಾಲ್ಲೂಕು ಘಟಕ ಅಧ್ಯಕ್ಷ ಬಸವರಾಜ ಖಾನಪ್ಪನವರ, ಸಾದಿಕ ಹಲ್ಯಾಳ, ದೀಪಕ ಹಂಜಿ, ಮಹಾದೇವ ಮಕ್ಕಳಗೇರಿ, ಹನೀಫ್ ಸನದಿ, ಅಶೋಕ ಬಂಡಿವಡ್ಡರ, ಪಪ್ಪು ಹಂದಿಗುಂದ, ರಮೇಶ ಕಮತಿ, ಮಲ್ಲು ಸಂಪಗಾರ, ಬಸವರಾಜ ಗಾಡಿವಡ್ಡರ, ಕರೆಪ್ಪ ಹೊರಟ್ಟಿ, ಕೆಂಪಣ್ಣ ಕಡಕೋಳ, ಮಹಾನಿಂಗ ಪೂಜಾರಿ, ಮಹಾದೇವ ಹುಚ್ಚನವರ, ದುಂಡಪ್ಪ ಪಾಟೀಲ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.