ಕಾಗವಾಡ: ತಾಲ್ಲೂಕಿನ ಉಗಾರ ಬುದ್ರುಕ ಗ್ರಾಮದ ಸಂತೋಷ ನಾಯಿಕ ಅವರ ಮನೆಯಲ್ಲಿದ್ದ ಫ್ರಿಜ್‌ನಲ್ಲಿ ಬೆಂಕಿ ಹೊತ್ತಿಕೊಂಡು, ಉರಿದ ಪರಿಣಾಮ ಮನೆಯಲ್ಲಿ ಬೆಲೆಬಾಳುವ ವಸ್ತುಗಳು ಸುಟ್ಟು ಹೋಗಿವೆ. ಫ್ರಿಜ್ ಸಿಡಿದಿದ್ದರಿಂದ ಗೋಡೆ ಸಹ ಬಿರುಕು ಬಿಟ್ಟಿದೆ.
ಅದೃಷ್ಟ ವಶಾತ್ ಮನೆಯಲ್ಲಿದ್ದ ಜನರಿಗೆ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಸ್ಥಳೀಯರ ಸಹಾಯದಿಂದ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದರು. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.