ADVERTISEMENT

ಕಳಸಾ–ಬಂಡೂರಿ: ಮಹತ್ವದ ಸಭೆ ನ. 30ರದು

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 7:12 IST
Last Updated 29 ನವೆಂಬರ್ 2020, 7:12 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಳಗಾವಿ: ಕಳಸಾ–ಬಂಡೂರಿ ಮತ್ತು ಗೋಕಾಕ ಹೊರವಲಯದ ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಹಾಗೂ ಇತರ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ತೀರುವಳಿ (ಕ್ಲಿಯರೆನ್ಸ್) ಪಡೆಯುವ ಕುರಿತು ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನ. 30ರಂದು ಮಧ್ಯಾಹ್ನ 12ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಲಸಂಪನ್ಮೂಲ, ಅರಣ್ಯ ಹಾಗೂ ಭೂದಾಖಲೆಗಳು ಇಲಾಖೆಗಳ ಹಿರಿಯ ಅಧಿಕಾರಿಗಳು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT