ADVERTISEMENT

ಕಲ್ಲೋಳ–ಯಡೂರ ಸೇತುವೆ ಮತ್ತೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2018, 19:30 IST
Last Updated 6 ಆಗಸ್ಟ್ 2018, 19:30 IST
ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ–ಯಡೂರ ಗ್ರಾಮಗಳ ಮಧ್ಯದ ಸೇತುವೆ ಕೃಷ್ಣಾ ನದಿ ನೀರಿನಲ್ಲಿ ಮುಳುಗಡೆಯಾಗಿದೆ
ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ–ಯಡೂರ ಗ್ರಾಮಗಳ ಮಧ್ಯದ ಸೇತುವೆ ಕೃಷ್ಣಾ ನದಿ ನೀರಿನಲ್ಲಿ ಮುಳುಗಡೆಯಾಗಿದೆ   

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮತ್ತೆ ಆರಂಭಗೊಂಡಿದ್ದು, ಅಲ್ಲಿಂದ ಕೃಷ್ಣಾ ನದಿಗೆ 46 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದೆ.

ತಾಲ್ಲೂಕಿನಲ್ಲಿ ಕಲ್ಲೋಳ–ಯಡೂರ ಗ್ರಾಮಗಳ ಮಧ್ಯೆ ಇರುವ ಕೆಳಮಟ್ಟದ ಸೇತುವೆ ಸೋಮವಾರ ಮುಳುಗಡೆಯಾಗಿದೆ. ಸೇತುವೆ ಮೇಲೆ ಸುಮಾರು ಎರಡು ಅಡಿಯಷ್ಟು ನೀರು ಹರಿಯುತ್ತಿದೆ. ಸುಮಾರು 20 ದಿನಗಳ ಕಾಲ ಮುಳುಗಡೆ ಸ್ಥಿತಿಯಲ್ಲಿದ್ದ ಈ ಸೇತುವೆ, ಜುಲೈ 29ರಂದು ಸಂಚಾರಕ್ಕೆ ಮುಕ್ತವಾಗಿತ್ತು. ಇದೀಗ ಮತ್ತೆ ಜಲಾವೃತಗೊಂಡಿರುವುದರಿಂದ ಸಾರ್ವಜನಿಕರು ಸುತ್ತು ಬಳಸಿ ಪ್ರಯಾಣಿಸುವಂತಾಗಿದೆ.

ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.