ADVERTISEMENT

ಸ್ವಂತ ಖರ್ಚಿನಲ್ಲಿ ಲಕ್ಷ್ಮಿ ಕಲ್ಯಾಣ ಮಂಟಪ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 13:52 IST
Last Updated 31 ಜುಲೈ 2021, 13:52 IST
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಗುಡದಮ್ಮ ದೇವಸ್ಥಾನದ ನೂತನ ಕಲ್ಯಾಣ ಮಂಟಪದ ಕಟ್ಟಡದ ಕಾಮಗಾರಿಗೆ ಶನಿವಾರ ಮುಖಂಡರಾದ ಚನ್ನರಾಜ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ಮೃಣಾಲ್ ಹೆಬ್ಬಾಳಕರ ಶನಿವಾರ ಚಾಲನೆ ನೀಡಿದರು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಗುಡದಮ್ಮ ದೇವಸ್ಥಾನದ ನೂತನ ಕಲ್ಯಾಣ ಮಂಟಪದ ಕಟ್ಟಡದ ಕಾಮಗಾರಿಗೆ ಶನಿವಾರ ಮುಖಂಡರಾದ ಚನ್ನರಾಜ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ಮೃಣಾಲ್ ಹೆಬ್ಬಾಳಕರ ಶನಿವಾರ ಚಾಲನೆ ನೀಡಿದರು   

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಗುಡದಮ್ಮ ದೇವಸ್ಥಾನದ ನೂತನ ಕಲ್ಯಾಣ ಮಂಟಪದ ಕಟ್ಟಡದ ಕಾಮಗಾರಿಗೆ ಶನಿವಾರ ಚಾಲನೆ ನೀಡಲಾಯಿತು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಹಾಗೂ ದೇವಸ್ಥಾನದ ಸಮಿತಿಯವರು ಪೂಜೆ ನೆರವೇರಿಸಿದರು.

‘ಗುಡದಮ್ಮ ದೇವಸ್ಥಾನದ ಕಲ್ಯಾಣಮಂಟಪ ನಿರ್ಮಾಣವು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿತ್ತು. ಅದಕ್ಕೆ ಸ್ಪಂದಿಸಿ ಶಾಸಕರು ವೈಯಕ್ತಿಕ ಖರ್ಚಿನಲ್ಲಿ ನಿರ್ಮಾಣ ಮಾಡಿಕೊಡಲು ಮುಂದಾಗಿದ್ದಾರೆ’ ಎಂದು ಚನ್ನರಾಜ ತಿಳಿಸಿದರು.

ADVERTISEMENT

ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಮುಖಂಡರಾದ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, ಮೃಣಾಲ ಹೆಬ್ಬಾಳಕರ, ತೌಸಿಫ್ ಫಣಿಬಂಧ, ಸಮೀರ, ಚಾಟೆ, ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಯ ಅಧ್ಯಕ್ಷರು, ತಮ್ಮಣ್ಣ, ದೇವಸ್ಥಾನ ಸಮಿತಿಯವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.