
ಬೆಳಗಾವಿ: ‘ಕನಕದಾಸರು ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ಸರ್ವ ಸಮುದಾಯಗಳ ಸಹಭಾಗಿತ್ವದಿಂದ ಇಂಥ ಜಯಂತಿಗಳ ಆಚರಣೆಗೆ ಮೆರುಗು ಬರುತ್ತದೆ’ ಎಂದು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹೇಳಿದರು.
ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಸಿದ್ದಣ್ಣ ತೇಜಿ, ‘ಕನಕದಾಸರು ಕುರುಬ ಜಾತಿ ಅಥವಾ ಒಂದೇ ಧರ್ಮಕ್ಕೆ ಸೀಮಿತವಲ್ಲ’ ಎಂದರು.
ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜ ಕುರಿಹುಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮುಖಂಡರಾದ ಯಲ್ಲಪ್ಪ ಕುರುಬರ, ಮಲ್ಲೇಶ ಚೌಗಲೆ ಇದ್ದರು.
ಇದಕ್ಕೂ ಮುನ್ನ ನಡೆದ ಭವ್ಯ ಮೆರವಣಿಗೆಗೆ ಮೇಯರ್ ಮಂಗೇಶ ಪವಾರ ಚಾಲನೆ ನೀಡಿದರು. ಉಪಮೇಯರ್ ವಾಣಿ ಜೋಶಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಇದ್ದರು.
ಜಾನಪದ ಕಲಾತಂಡಗಳ ಪ್ರದರ್ಶನ ಗಮನಸೆಳೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.