ಬೆಳಗಾವಿ: ಪಾಲಿಕೆ ಪರಿಷತ್ ಸಭೆಯಲ್ಲಿ ಮರಾಠಿಯಲ್ಲಿ ದಾಖಲೆ ನೀಡುವಂತೆ ಎಂಇಎಸ್ ಬೆಂಬಲಿತ ಸದಸ್ಯ ರವಿ ಸಾಳುಂಕೆ ಕೇಳಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
ಪಾಲಿಕೆ ಸಭಾಂಗಣದಲ್ಲಿ ಇನ್ನೂ ಸಭೆ ನಡೆದಿದೆ. ಇದರ ಮಧ್ಯೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
'ಮರಾಠಿಯಲ್ಲಿ ದಾಖಲೆ ಕೇಳಿದ ಸದಸ್ಯರನ್ನು ಅನರ್ಹಗೊಳಿಸಬೇಕು' ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.