ADVERTISEMENT

ಎಂಇಎಸ್‌, ಶಿವಸೇನೆ ಕಾರ್ಯಕರ್ತರು ಭಯೋತ್ಪಾದಕರಿದ್ದಂತೆ: ನಾರಾಯಣ ಗೌಡ ಕಿಡಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2025, 5:37 IST
Last Updated 25 ಫೆಬ್ರುವರಿ 2025, 5:37 IST
<div class="paragraphs"><p>ಬೆಳಗಾವಿ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ, ಹಲ್ಲೆಯಿಂದ ಚಿಕಿತ್ಸೆ ಪಡೆಯುತ್ತಿರುವ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದರು   ಪ್ರಜಾವಾಣಿ ಚಿತ್ರ</p></div>

ಬೆಳಗಾವಿ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ, ಹಲ್ಲೆಯಿಂದ ಚಿಕಿತ್ಸೆ ಪಡೆಯುತ್ತಿರುವ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದರು ಪ್ರಜಾವಾಣಿ ಚಿತ್ರ

   

ಬೆಳಗಾವಿ: ‘ಪಾಕಿಸ್ತಾನದ ಭಯೋತ್ಪಾದಕರಿಗೂ ಎಂಇಎಸ್‌ ಹಾಗೂ ಶಿವಸೇನೆಯ ಕಾರ್ಯಕರ್ತರಿಗೂ ಯಾವುದೇ ವ್ಯತ್ಯಾಸವಿಲ್ಲ. ಇವರ ವರ್ತನೆಗಳು ಅಷ್ಟು ಕ್ರೂರವಾಗಿವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಕಿಡಿಕಾರಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಅಮಾಯಕ ಬಸ್‌ ಚಾಲಕ, ನಿರ್ವಾಹಕರನ್ನು ಹೊಡೆಯುತ್ತಾರೆ. ಅವರ ಮುಖಕ್ಕೆ ಮಸಿ ಬಳಿದು ಬೆದರಿಕೆ ಹಾಕಿ ಜೈ ಮಹಾರಾಷ್ಟ್ರ ಎಂದು ಹೇಳಿಸಿದ್ದಾರೆ. ಇದು ಭಯೋತ್ಪಾದಕರು ಮಾಡುವಂಥ ಕೃತ್ಯ’ ಎಂದರು.

ADVERTISEMENT

‘ಕನ್ನಡಿಗರನ್ನು ಕೆಣಕಿದವರನ್ನು ಸುಮ್ಮನೇ ಬಿಡುವುದಿಲ್ಲ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇಲ್ಲಿರುವ ಎಲ್ಲ ಮರಾಠಿಗರೂ ಜೈ ಕರ್ನಾಟಕ ಎಂದು ಹೇಳಲೇಬೇಕಾದ ದಿನಗಳು ಬರುತ್ತವೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಈಗ ಬೆಳಗಾವಿಯಲ್ಲಿ ಸಂಪೂರ್ಣ ನಾಶವಾಗಿದೆ. ಯಾರೂ ದಿಕ್ಕಿಲ್ಲ. ಆ ಹೊಟ್ಟೆಕಿಚ್ಚಿನಿಂದ ಈ ರೀತಿ ಹಲ್ಲೆ, ದಾಳಿಗಳನ್ನು ಮುಂದುವರಿಸಿದ್ದಾರೆ. ಕ್ರಿಯೆಗೆ ಪ್ರತಿಕ್ರಿಯೆ ನೀಡಿಯೇ ತೀರುತ್ತೇವೆ’ ಎಂದೂ ಹೇಳಿದರು.

ಜಿಲ್ಲಾಧಿಕಾರಿ ವಿರುದ್ಧ ಕಿಡಿ:

‘ಮರಾಠಿಗರಿಗೆ ಮರಾಠಿ ಭಾಷೆಯಲ್ಲೇ ದಾಖಲೆ ನೀಡುತ್ತೇನೆ ಎಂದು ಹೇಳಿದ ಜಿಲ್ಲಾಧಿಕಾರಿ ನಡೆ ಖಂಡನೀಯ. ಹೊರ ರಾಜ್ಯದಿಂದ ಬಂದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ಮಾಡಬೇಡಿ. ಮರಾಠಿಗರನ್ನು ಓಲೈಕೆ ಮಾಡಲು ಮುಂದಾದರೆ ಹೋರಾಟ ಎದುರಿಸಬೇಕಾಗುತ್ತದೆ. ಗಡಿ ವಿವಾದ ಇನ್ನೂ ಸುಪ್ರೀಂಕೋರ್ಟ್‌ನಲ್ಲಿದೆ. ಇಂಥ ಸಂದರ್ಭದಲ್ಲಿಯೂ ಮರಾಠಿಗರ ಮನವಿಗೆ ಸ್ಪಂದಿಸಿ ಮರಾಠಿ ಭಾಷೆಯಲ್ಲೂ ದಾಖಲೆ ಕೊಡಲಾಗುವುದು ಎಂದು ಹೇಳಲು ನೀವು ಯಾರು? ಸರಿಯಾಗಿ ಕೆಲಸ ಮಾಡಲು ಆಗದಿದ್ದರೆ ಬಿಟ್ಟು ತೊಲಗಿ. ಕನ್ನಡಿಗರ ಭವಿಷ್ಯಕ್ಕೆ ತೊಂದರೆ ಆಗುವಂಥ ಹೆಜ್ಜೆ ಇಡಬೇಡಿ’ ಎಂದೂ ಅವರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.