ADVERTISEMENT

ಸಚಿವ ಶ್ರೀಮಂತ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 10:48 IST
Last Updated 4 ಆಗಸ್ಟ್ 2020, 10:48 IST
ಅಥಣಿ ತಾಲ್ಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮರಾಠಿಯಲ್ಲಿ ಭಾಷಣ ಮಾಡಿದ ಜವಳಿ ಸಚಿವ ಶ್ರೀಮಂತ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಜಿಲ್ಲಾ ಘಟಕದ ಸದಸ್ಯರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು
ಅಥಣಿ ತಾಲ್ಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮರಾಠಿಯಲ್ಲಿ ಭಾಷಣ ಮಾಡಿದ ಜವಳಿ ಸಚಿವ ಶ್ರೀಮಂತ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಜಿಲ್ಲಾ ಘಟಕದ ಸದಸ್ಯರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಅಥಣಿ ತಾಲ್ಲೂಕಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿ ಮರಾಠಿಯಲ್ಲಿ ಭಾಷಣ ಮಾಡಿದ ಜವಳಿ ಸಚಿವ ಶ್ರೀಮಂತ ಪಾಟೀಲ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಆಗ್ರಹಿಸಿ ಕರವೇ ಜಿಲ್ಲಾ ಘಟಕದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಚಿವರ ಫೋಟೊಗಳನ್ನು ತುಳಿದು, ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

‘ಗಡಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರು ಸೌಹಾರ್ದದಿಂದ ಬದುಕುತ್ತಿದ್ದಾರೆ. ಹೀಗಿರುವಾಗ ಸಚಿವರು ಮಹಾರಾಷ್ಟ್ರದ ಉದ್ಯಮಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಅಪಮಾನ ಮಾಡಿದ್ದಾರೆ. ಅಲ್ಲಿ ಫಲಕಗಳೆಲ್ಲವೂ ಮರಾಠಿಯಲ್ಲಿದ್ದವು. ಈ ಮೂಲಕ ಕನ್ನಡಕ್ಕೆ ಅಪಮಾನ ಮಾಡಲಾಗಿದೆ’ ಎಂದು ದೂರಿದರು.

ADVERTISEMENT

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.‌

ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗೇನಟ್ಟಿ, ರಾಜ್ಯ ಸಂಚಾಲಕ ಮಹಾದೇವ ತಳವಾರ, ಸುರೇಶ ಗವನ್ನವರ, ನಿಂಗರಾಜ ಗುಂಡ್ಯಾಗೋಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.