ADVERTISEMENT

₹500 ಕೊಟ್ಟು ಜನ ಕರೆದುಕೊಂಡು ಬರಬೇಕು| ಸಿದ್ದರಾಮಯ್ಯ ವಿಡಿಯೊ ತಿರುಚಲಾಗಿದೆ: ಸತೀಶ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2023, 12:56 IST
Last Updated 2 ಮಾರ್ಚ್ 2023, 12:56 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ    

ಬೆಳಗಾವಿ: ‘ಪ್ರಜಾಧ್ವನಿ ಯಾತ್ರೆಗೆ ಐನೂರು ರೂಪಾಯಿ ಕೊಟ್ಟು ಜನರನ್ನು ಕರೆತರಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿಲ್ಲ. ಬದಲಾಗಿ, ಬೆಳಗಾವಿಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಜನರನ್ನು ದುಡ್ಡು ಕೊಟ್ಟು ಕರೆಸಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಬಿಜೆಪಿಯ ಕೆಲವರು ಈ ವಿಡಿಯೊ ತಿರುಚಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ತಾಳಿಕೊಳ್ಳಲಾಗದೇ, ಸಿದ್ದರಾಮಯ್ಯ ಅವರ ಪ್ರಚಾರ ಸಹಿಸಲಾಗದೇ ಕೆಲವರು ವಿಡಿಯೊ ತಿರುಚಿ ಹರಿಬಿಟ್ಟಿದ್ದಾರೆ. ವಿನಾಕಾರಣ ಅಪಪ್ರಚಾರ ನಡೆಸಿದ್ದಾರೆ. ಜನ ಇಂಥದ್ದಕ್ಕೆ ಕಿವಿಗೊಡಬಾರದು’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

‘ಪ್ರತಿಯೊಬ್ಬರಿಗೂ ಐನೂರು ರೂಪಾಯಿ ಕೊಟ್ಟು ಕರಕೊಂಡು ಬರಬೇಕು’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾದ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಐನೂರು ರೂಪಾಯಿ ಯಾರಿಗೆ– ಯಾರು ಕೊಟ್ಟು ಕರಕೊಂಡು ಬರಬೇಕು ಎಂಬ ಬಗ್ಗೆ ಅವರ ಮಾತಲ್ಲಿ ಸ್ಪಷ್ಟತೆ ಇಲ್ಲ.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪಂತ ಬಾಳೇಕುಂದ್ರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್‌ ‘ಪ್ರಜಾಧ್ವನಿ’ ಯಾತ್ರೆಗೆ ಆಗಮಿಸುವ ವೇಳೆ, ಬಸ್‌ನಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರೂ ಚರ್ಚೆಯಲ್ಲಿ ತೊಡಗಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.