ADVERTISEMENT

Karnataka Bandh: ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 5:51 IST
Last Updated 22 ಮಾರ್ಚ್ 2025, 5:51 IST
   

ಬೆಳಗಾವಿ: ಕರ್ನಾಟಕ ಬಂದ್ ಬೆಂಬಲಿಸಿ, ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚನ್ನಮ್ಮನ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧಿಸಬೇಕು ಎಂದು ಘೋಷಣೆ ಕೂಗಿದರು.

ಪ್ರತಿಭಟನೆ ಕಾವು ಪಡೆಯುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಈ ವೇಳೆ ಪರಸ್ಪರರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.