ADVERTISEMENT

ಹಿರೇಬಾಗೇವಾಡಿ | ಹಳ್ಳ ದಾಟುವಾಗ ಬೈಕ್‌ ಸಮೇತ ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 13:33 IST
Last Updated 6 ಆಗಸ್ಟ್ 2025, 13:33 IST
   

ಹಿರೇಬಾಗೇವಾಡಿ: ಸಮೀಪದ ಚಂದನಹೊಸೂರ ಗ್ರಾಮದ ಬಳಿ ಮಂಗಳವಾರ ರಾತ್ರಿ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬರು ಹಳ್ಳ ದಾಟುವಾಗ ಬೈಕ್‌ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ.

ಖಾನಾಪೂರ ತಾಲ್ಲೂಕಿನ ಗಾಡಿಕೊಪ್ಪ ಗ್ರಾಮದ ನಿವಾಸಿ, ತಾರಿಹಾಳ ಗ್ರಾಮ ಪಂಚಾಯಿತಿ ಸಿಬ್ಬಂದಿ ಸುರೇಶ ನಿಜಗುಣಿ ಗುಂಡಣ್ಣವರ (48) ನೀರುಪಾಲಾದವರು.

ಮಂಗಳವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಗಡಗೋಡಿ ಹಳ್ಳ ರಭಸದಿಂದ ಹರಿಯುತ್ತಿತ್ತು. ಬೆಳಿಗ್ಗೆ ಅದೇ ಹಳ್ಳ ದಾಟಿ ಹೋಗಿದ್ದ ಸುರೇಶ ಅವರು ರಾತ್ರಿ ಮರಳುವಾಗ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋದರು. ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಹಿರೇಬಾಗೇವಾಡಿ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.