
ವೆಂಕಟೇಶ ಕುಲಕರ್ಣಿ
ಕಾಗವಾಡ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಅ. 22 ರಿಂದ 31 ಅಂತಿಮ ದಿನವಾಗಿರುತ್ತದೆ ಎಂದು ತಹಶೀಲ್ದಾರ್ ರವೀಂದ್ರ ಹಾದಿಮನಿ, ತಾಲ್ಲೂಕು ಹಿಂದೂಳಿದ ವರ್ಗಗಳ ಕಲ್ಯಾಣಾಧಿಕಾರಿ ವೆಂಕಟೇಶ ಕುಲಕರ್ಣಿ ತಿಳಿಸಿದರು.
‘ತಾಲ್ಲೂಕಿನ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕುಟುಂಬಗಳ ಸಮೀಕ್ಷೆಯಲ್ಲಿ ಯಾವುದೇ ಕುಟುಂಬ ಬಿಟ್ಟು ಹೋಗಿದ್ದಲ್ಲಿ ಅಂತಹ ನಾಗರಿಕರು ಕುಟುಂಬದ ಮುಖ್ಯಸ್ಥರ ಹೆಸರು, ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಸಂಬಂಧಿಸಿದ ಗ್ರಾಮ, ಪಟ್ಟಣದ ನ್ಯಾಯ ಬೆಲೆ (ರೇಷನ್)ಅಂಗಡಿಯಲ್ಲಿ ಮಾಹಿತಿಯನ್ನು ನೀಡಲು ಕೋರಲಾಗಿದೆ. ಮಾಹಿತಿ ನೀಡಿದ್ದಲ್ಲಿ ಯಾವುದೇ ಕುಟುಂಬಗಳು ಸಮೀಕ್ಷೆಯಿಂದ ಹೊರಗುಳಿಯದಂತೆ ಕ್ರಮ ಕೈಕೊಳ್ಳಲು ತಾಲ್ಲೂಕು ಆಡಳಿತಕ್ಕೆ ಸಹಕಾರಿ ಆಗಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.