
ಪ್ರಜಾವಾಣಿ ವಾರ್ತೆ
ಪ್ರಿಯಾಂಕಾ ಜಾರಕಿಹೊಳಿ
ಹುಕ್ಕೇರಿ (ಬೆಳಗಾವಿ ಜಿಲ್ಲೆ): ‘ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯಬೇಕು’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಮಾತನಾಡಿ, ‘ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರೇ ಮುಂದುವರಿಯುವುದು ಸೂಕ್ತ. ಆದರೂ ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ’ ಎಂದರು.
‘ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು 2028ಕ್ಕೆ ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗಂತೂ ಸಚಿವರಿದ್ದಾರೆ. ಹೈಕಮಾಂಡ್ ಅವರಿಗೆ ಸಿ.ಎಂ ಹುದ್ದೆ ನೀಡಿದರೆ ನಿಭಾಯಿಸಬಲ್ಲರು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.