ADVERTISEMENT

ಬೆಳಗಾವಿಗೆ ಆಗಮಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2022, 9:55 IST
Last Updated 8 ಮಾರ್ಚ್ 2022, 9:55 IST
ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸ್ವಾಗತಿಸಲಾಯಿತು –  ಪ್ರಜಾವಾಣಿ ಚಿತ್ರ
ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸ್ವಾಗತಿಸಲಾಯಿತು – ಪ್ರಜಾವಾಣಿ ಚಿತ್ರ   

ಬೆಳಗಾವಿ: ಮೂರು ದಿನಗಳ ಬೆಳಗಾವಿ ಪ್ರವಾಸ ಕೈಗೊಂಡಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸ್ವಾಗತಿಸಲಾಯಿತು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಹೂಗುಚ್ಛ ನೀಡುವ ಮೂಲಕ ಬರಮಾಡಿಕೊಂಡರು.

ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಎಸ್ಪಿ ಲಕ್ಷ್ಮಣ ನಿಂಬರಗಿ, ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರೇಗೌಡ ಉಪಸ್ಥಿತರಿದ್ದರು.

ADVERTISEMENT

ಮಾರ್ಚ್ 9ರಂದು ನಡೆಯಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ಹಾಗೂ ಮಾರ್ಚ್ 10ರಂದು ಆಯೋಜಿಸಿರುವ ವಿಟಿಯು 21ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಇಲ್ಲಿಗೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.