
ಬೆಳಗಾವಿ: ಇಲ್ಲಿನ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್, ಹಿರಿಯ ಮತ್ತು ಯುವ ಸಾಹಿತಿಗಳಿಗೆ 2023, 2024 ಮತ್ತು 2025ನೇ ಸಾಲಿನ ವಾರ್ಷಿಕ ಕಥೆ, ಕಾವ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿತು.
ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ, ಕವಿ ಎಚ್.ಎಸ್.ಶಿವಪ್ರಕಾಶ ಅವರಿಗೆ 2023ನೇ ಸಾಲಿನ ಕಾವ್ಯ ಪ್ರಶಸ್ತಿ, ಚಿಂತಕ ಮತ್ತು ಪತ್ರಕರ್ತ ಜಿ.ರಾಮಕೃಷ್ಣ ಅವರಿಗೆ 2024ನೇ ಸಾಲಿನ ವೈಚಾರಿಕ ಮತ್ತು ಪತ್ರಿಕೋದ್ಯಮ ಪ್ರಶಸ್ತಿ, ಕಥೆಗಾರ್ತಿ ಬಿ.ಟಿ.ಜಾಹ್ನವಿ ಅವರಿಗೆ 2025ನೇ ಸಾಲಿನ ಕಥಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಗಳು ತಲಾ ₹ 50 ಸಾವಿರ ಒಳಗೊಂಡಿವೆ.
ಶಿವಮೊಗ್ಗದ ಕೆ.ಅಕ್ಷತಾ, ಮಂಗಳೂರಿನ ವಿಲ್ಸನ್ ಕಟೀಲ್ ಮತ್ತು ರಾಯಚೂರಿನ ಆರಿಫ್ ರಾಜಾ ಅವರಿಗೆ 2023, 2024 ಮತ್ತು 2025ನೇ ಸಾಲಿನ ಯುವ ಸಾಹಿತ್ಯ ಪುರಸ್ಕಾರ ನೀಡಲಾಯಿತು. ಪ್ರಶಸ್ತಿ ತಲಾ ₹10 ಸಾವಿರ ನಗದು ಹೊಂದಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ
ವೆಂಕಟಗಿರಿ ದಳವಾಯಿ ಅಭಿನಂದನಾ ನುಡಿಗಳನ್ನಾಡಿದರು.
ಟ್ರಸ್ಟ್ ಅಧ್ಯಕ್ಷೆ ವಿನಯಾ ಒಕ್ಕುಂದ, ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅಧ್ಯಕ್ಷ ವೈ.ಬಿ.ಹಿಮ್ಮಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿನಿರ್ದೇಶಕ ಕೆ.ಎಚ್.ಚೆನ್ನೂರ, ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇತರರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.