ADVERTISEMENT

ಏಪ್ರಿಲ್‌, ಮೇ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ: ರಾಜ್ಯ ಚುನಾವಣಾ ಆಯುಕ್ತ

​ಪ್ರಜಾವಾಣಿ ವಾರ್ತೆ
Published 14 ಜನವರಿ 2025, 0:30 IST
Last Updated 14 ಜನವರಿ 2025, 0:30 IST
<div class="paragraphs"><p>ಚುನಾವಣೆ</p></div>

ಚುನಾವಣೆ

   

(ಸಾಂದರ್ಭಿಕ ಚಿತ್ರ)

ಬೆಳಗಾವಿ: ‘ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಇದೇ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಘೋಷಣೆ ಮಾಡಲಾಗುವುದು’ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿದರು.

ADVERTISEMENT

‘ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಕಾರಣ ಚುನಾವಣೆ ವಿಳಂಬವಾಗಿವೆ. ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದ ತಕ್ಷಣ ಚುನಾವಣೆ ಘೋಷಿಸಲಾಗುವುದು. ವಿದ್ಯುನ್ಮಾನ ಮತಪೆಟ್ಟಿಗೆ ಬದಲು ಮತಪತ್ರಗಳನ್ನೇ ಬಳಸುವ ಉದ್ದೇಶವಿದ್ದು, ಅಂತಿಮ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಪ್ರತಿ ಸಲ ಚುನಾವಣೆ ಮುಗಿದ ಬಳಿಕ ಇವಿಎಂ ಯಂತ್ರಗಳ ವಿಶ್ವಾಸಾರ್ಹತೆ ಪ್ರಶ್ನಿಸಲಾಗುತ್ತದೆ. ರಾಜಕೀಯ ಪಕ್ಷಗಳ ನಾಯಕರು ಮತ್ತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ, ಮತಪತ್ರಗಳ ಬಳಕೆ ಬಗ್ಗೆ ತೀರ್ಮಾನಿಸಲಾಗುವುದು’ ಎಂದರು.

‘ಬೆಳಗಾವಿ ಜಿಲ್ಲೆಯಲ್ಲಿ 91 ಜಿಲ್ಲಾ ಪಂಚಾಯಿತಿ ಮತ್ತು 301 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲಾಗಿದೆ. ಹೊಸದಾಗಿ 7 ಪಟ್ಟಣ ಪಂಚಾಯಿತಿಗಳು ರಚನೆಯಾಗಿದ್ದು, ಈ ಚುನಾವಣೆಗಳನ್ನೂ ಇದೇ ವೇಳೆ ನಡೆಸುವ ಸಾಧ್ಯತೆ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.