ADVERTISEMENT

ಗಡಿ ವಿವಾದ ಈಗಾಗಲೇ ಬಗೆಹರಿದಿದೆ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 7:38 IST
Last Updated 1 ನವೆಂಬರ್ 2020, 7:38 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಳಗಾವಿ: ‘ಕರ್ನಾಟಕ–ಮಹಾರಾಷ್ಟ್ರ ನಡುವಿನ ಗಡಿ ವಿವಾದ ಈಗಾಗಲೇ ಬಗೆಹರಿದಿದೆ. ಕೆಲವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುತ್ತಿದ್ದಾರೆ. ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಕನ್ನಡ–ಮರಾಠಿ ಸಮಸ್ಯೆ ಇಲ್ಲ. ಅದೆಲ್ಲ ಇತ್ಯರ್ಥವಾಗಿದೆ. ನಾವೆಲ್ಲರೂ ಒಂದಾಗಿದ್ದೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಭಾನುವಾರ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮಂಡಳಿಯ 13 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆಯಾಗಿದೆ. ಸಂಘಗಳ ಮೇಲೆ ಹಿಡಿತ ಹೊಂದಿರುವವರು ಆಯ್ಕೆಯಾಗಿದ್ದಾರೆ.ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇದು ಆಯಾ ಅಭ್ಯರ್ಥಿಗಳ ವೈಯಕ್ತಿಕ ಚುನಾವಣೆಯೇ ಹೊರತು, ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT