
ಮೂಡಲಗಿ: ‘ರಾಜ್ಯದಲ್ಲಿ ಕ್ರಿಮಿನಲ್‌ಗಳು ಮತ್ತು ಭಯೋತ್ಪಾದಕರಿಗೆ ದಂಡನೆ ಕೊಡಬೇಕಾದ ಸರ್ಕಾರವು ರಾಜಾಶ್ರಯವನ್ನು ನೀಡುತ್ತಿರುವುದು ಗೃಹ ಇಲಾಖೆಯು ರಾಜ್ಯದ ಮರ್ಯಾದೆಯನ್ನು ಹರಾಜು ಹಾಕುತ್ತಿದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ದೂರಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರೆಯುತ್ತಿರುವ ಬಗ್ಗೆ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ ಅವರು, ಎನ್‌ಐಎಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
‘ರಾಜ್ಯದಲ್ಲಿ ಅಪರಾಧಿಗಳು ಜೈಲಿಗೆ ಹೋದರೆ ಸಾಕು ಅವರಿಗೆ ಐಷಾರಾಮಿ ವ್ಯವಸ್ಥೆ ದೊರೆಯುತ್ತದೆ ಎನ್ನುವಂತಾಗಿದೆ. ಇಂಥ ಕೃತ್ಯಗಳು ನಡೆಯುತ್ತಿರುವುದನ್ನು ನೋಡಿಯೂ ಕಣ್ಣು ಮುಚ್ಚಿ ಕುಳಿತಿರುವ ಗೃಹ ಸಚಿವರಿಗೆ ನಾಚಿಕೆಯಾಗಬೇಕು’ ಎಂದಿದ್ದಾರೆ.
ರಾಜ್ಯದ ಜೈಲಿನಲ್ಲಿ ಇಂಥ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಎನ್‌ಐಎಯ ಇಲ್ಲಿಯ ಬೇಹುಗಾರಿಕೆ ದಳಕ್ಕೆ 4 ತಿಂಗಳ ಹಿಂದೆ ಎಚ್ಚರಿಕೆ ನೀಡಿದ್ದಾಗ್ಯೂ ನಿರ್ಲಕ್ಷ ಮಾಡಿರುವುದರಲ್ಲಿ ಸರ್ಕಾರದ ಕೈವಾಡವಿದೆ. ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು ಮತ್ತು ಈ ಕೃತ್ಯವನ್ನು ಎನ್‌ಐಎಗೆ ಒಪ್ಪಿಸಬೇಕು ಎಂದು ಕಡಾಡಿ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.