ADVERTISEMENT

ಆತ್ಮಹತ್ಯೆ ಪ್ರಕರಣ: ಸ್ವಗ್ರಾಮ ಬಡಸದತ್ತ ಗುತ್ತಿಗೆದಾರ ಸಂತೋಷ್ ಮೃತದೇಹ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 10:34 IST
Last Updated 14 ಏಪ್ರಿಲ್ 2022, 10:34 IST
ಸಂತೋಷ್ ಪಾಟೀಲ್‌ ಮೃತದೇಹವನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಸಾಗಿಸಲಾಗುತ್ತಿದೆ.
ಸಂತೋಷ್ ಪಾಟೀಲ್‌ ಮೃತದೇಹವನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಸಾಗಿಸಲಾಗುತ್ತಿದೆ.    

ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ‌ ಲಂಚದ ಆರೋಪ‌ ಮಾಡಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್‌ಮೃತದೇಹವನ್ನು ಸ್ವಗ್ರಾಮ ಬಡಸದತ್ತ ತೆಗೆದುಕೊಂಡು ಹೋಗಲಾಗುತ್ತಿದೆ.

ಕಿತ್ತೂರು ತಾಲ್ಲೂಕಿನ ಎಂ‌.ಕೆ. ಹುಬ್ಬಳ್ಳಿ ಮೂಲಕ ಬಡಸ ಗ್ರಾಮಕ್ಕೆ ಸಾಗಿಸಲಾಗುತ್ತಿದೆ. ಅಲ್ಲಿದ್ದ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ ಕುಟುಂಬದವರು, ಆರೋಪಿಗಳನ್ನು ಬಂಧಿಸಲು ಅಗತ್ಯವಾದ ದಾಖಲೆಗಳು ಇವೆ. ನಮ್ಮ ಬಳಿಯೂ ಸಾಕಷ್ಟಿವೆ. ಅವುಗಳನ್ನು ಕೊಡಲಾಗುವುದು. ಆರೋಪಿಗಳನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲಿಯವರು ತನಿಖಾ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಸದ್ಯ ಮೃತದೇಹವನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಸಾಗಿಸಲಾಗುತ್ತಿದೆ. ಗ್ರಾಮದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.