ADVERTISEMENT

ಬಿಜೆಪಿಯ 40 ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ: ರಾಜು ಕಾಗೆ ಹೊಸ ಬಾಂಬ್

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 14:05 IST
Last Updated 3 ಅಕ್ಟೋಬರ್ 2021, 14:05 IST
ಮಾಜಿ ಶಾಸಕ ರಾಜು ಕಾಗೆ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಸಂದರ್ಭ –ಸಂಗ್ರಹ ಚಿತ್ರ
ಮಾಜಿ ಶಾಸಕ ರಾಜು ಕಾಗೆ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಸಂದರ್ಭ –ಸಂಗ್ರಹ ಚಿತ್ರ   

ಬೆಳಗಾವಿ: ‘‌ಬಿಜೆಪಿಯ 40 ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಜು ಕಾಗೆ ಹೇಳಿದರು.

ಕಾಗವಾಡ ತಾಲ್ಲೂಕಿನ ಮದಭಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಜಿಲ್ಲೆಯ 2–3 ಶಾಸಕರು ಕೂಡ ಬರಲಿದ್ದಾರೆ’ ಎಂದರು.

‘ರಾಜ್ಯ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಅಲ್ಲಿ ಬೇಸರವಾಗಿರುವವರು ನಮ್ಮೊಂದಿಗೆ ಬರುತ್ತಾರೆ’ ಎಂದು ತಿಳಿಸಿದರು.

ADVERTISEMENT

ಈ ವಿಷಯದ ಬಗ್ಗೆ ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿಯಲ್ಲಿ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ‘ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರುವ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿರುವುದು ನಿಜ. ಯಾರಾರು ಬರುತ್ತಾರೆ ಎಂಬ ಮಾಹಿತಿ ಸದ್ಯಕ್ಕೆ ನನಗಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.