ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮತ್ತೇ ಹೆಚ್ಚಿರುವ ಪರಿಣಾಮವಾಗಿ ಕೃಷ್ಣಾ ಹಾಗೂ ಉಪನದಿಗಳ ಜಲಾವೃತಗೊಂಡ ಸೇತುವೆಗಳ ಸಂಖ್ಯೆ 7ಕ್ಕೆ ಏರಿದೆ. ಕಳೆದ ಒಂದು ವಾರದಿಂದ ಕೃಷ್ಣಾ ನದಿಯ ಕಲ್ಲೋಳ-ಯಡೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಬಾರವಾಡ-ಕುನ್ನೂರ ಸೇತುವೆಗಳು ಜಲಾವೃತಗೊಂಡಿದ್ದವು.
ಇದೀಗ ವೇದಗಂಗಾ ನದಿಯ ಜತ್ರಾಟ-ಭೀವಶಿ, ಸಿದ್ನಾಳ-ಅಕ್ಕೋಳ ಹಾಗೂ ಭೋಜ-ಕುನ್ನೂರ ಸೇತುವೆಗಳು ಬುಧವಾರ ಮುಳುಗಡೆಯಾಗಿವೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದ ಕೊಯ್ನಾದಲ್ಲಿ 7.8 ಸೆಂ.ಮೀ, ವಾರಣಾ-10.3 ಸೆಂ.ಮೀ, ಕಾಳಮ್ಮವಾಡಿ-11.3 ಸೆಂ.ಮೀ, ಮಹಾಬಳೇಶ್ವರ-8.8 ಸೆಂ.ಮೀ, ನವಜಾ- 3.9 ಸೆಂ.ಮೀ, ರಾಧಾನಗರಿ-15.8 ಸೆಂ.ಮೀ ಮಳೆ ದಾಖಲಾಗಿದೆ.
ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜಿನಿಂದ ಕೃಷ್ಣಾ ನದಿಗೆ 73,042 ಕ್ಯೂಸೆಕ್ ಹೊರ ಹರಿವು ಇದ್ದು, ಕಲ್ಲೋಳ ಬಳಿಯಲ್ಲಿ ದೂಧಗಂಗಾ ನದಿಗೆ ಒಳ ಹರಿವು 19,008 ಕ್ಯೂಸೆಕ್ ಇದೆ. ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 92,050 ಕ್ಯೂಸೆಕ್ ಹೊರ ಹರಿವು ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.