ರಾಮದುರ್ಗ (ಬೆಳಗಾವಿ ಜಿಲ್ಲೆ): ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ ಮನೆ ಚಾವಣಿ ಬಿದ್ದು ವಾಮನರಾವ್ ಬಾಪೂ ಪವಾರ್ (75) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಾಮನರಾವ್ ಅವರು ಮನೆಯಲ್ಲಿ ಮಲಗಿದ್ದಾಗ ನಸುಕಿನ 4.11 ಗಂಟೆಗೆ ಮನೆಯ ಚಾವಣಿ ಏಕಾಏಕಿ ಕುಸಿದುಬಿತ್ತು. ಮಣ್ಣಿನ ಅವಶೇಷಗಳಡಿ ಸಿಲುಕಿದ ಅವರನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಹೊರತೆಗೆದರು. ಅಷ್ಟರೊಳಗೆ ಅವರು ಮೃತಪಟ್ಟಿದ್ದರು.
ರಾಮದುರ್ಗ ಪಿಎಸ್ಐ ಸವಿತಾ ಮುನ್ಯಾಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.