ADVERTISEMENT

ಕಂಪನಿಗಳಲ್ಲಿ ರಾಜ್ಯೋತ್ಸವ ಕಡ್ಡಾಯವಾಗಲಿ:ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 2:46 IST
Last Updated 28 ಅಕ್ಟೋಬರ್ 2025, 2:46 IST
ಬೆಳಗಾವಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಗಳಲ್ಲಿ  ರಾಜ್ಯೋತ್ಸವ ಆಚರಣೆಯನ್ನು ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು
ಬೆಳಗಾವಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಗಳಲ್ಲಿ  ರಾಜ್ಯೋತ್ಸವ ಆಚರಣೆಯನ್ನು ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು   

ಬೆಳಗಾವಿ: ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.

ನಗರವೂ ಸೇರಿದಂತೆ ಜಿಲ್ಲೆಯ ಎಲ್ಲ ಕೈಗಾರಿಕಾ ಪ್ರದೇಶಗಳಲ್ಲೂ ಹಲವು ಕೈಗಾರಿಕೆಗಳು, ಖಾಸಗಿ ಉತ್ಪಾದಕ ಕಂಪನಿಗಳು ಇವೆ. ಆದರೆ, ಅವುಗಳಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುವುದಿಲ್ಲ. ಹೀಗಾಗಿ ಇದೇ ನವೆಂಬರ್ 1ರಂದು ಎಲ್ಲಾ ಕೈಗಾರಿಕಾ ಖಾಸಗಿ ಕಂಪನಿಗಳಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜಿ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಿಸುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದೂ ಆಗ್ರಹಿಸಿದರು.

ADVERTISEMENT

ಸಂಘಟನೆಯ ಮುಖಂಡರಾದ ಬಾಳೇಶ ಪಾಟೀಲ, ಬಾಳಪ್ಪ ಗುಡಗೆನಟ್ಟಿ, ಉಮೇಶ ಲಕ್ಕಣವರ, ಬಾಳು ಪಾಟೀಲ ಇತರರು ನೇತೃತ್ವ ವಹಿಸಿದ್ದರು. ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.