ADVERTISEMENT

ಬೆಳಗಾವಿ | ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 16:16 IST
Last Updated 14 ಆಗಸ್ಟ್ 2024, 16:16 IST
ಬೆಳಗಾವಿ ತಾಲ್ಲೂಕಿನ ಉಚಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದರು
ಬೆಳಗಾವಿ ತಾಲ್ಲೂಕಿನ ಉಚಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದರು   

ಬೆಳಗಾವಿ: ತಾಲ್ಲೂಕಿನ ಉಚಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸಲು ಹಾಗೂ ಕನ್ನಡ ಬಾವುಟ ಅಳವಡಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬುಧವಾರ ಪ್ರತಿಭಟನೆಗೆ ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಘೋಷಣೆ ಕೂಗುತ್ತ ಕಾರ್ಯಕರ್ತರು ಗ್ರಾಮದೊಳಗೆ ನುಗ್ಗಲು ಯತ್ನಿಸಿದರು. ಅವರನ್ನು  ಪೊಲೀಸರು ತಡೆದಾಗ, ಪರಸ್ಪರರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮುಖಂಡರಾದ ವಾಜೀದ್‌ ಹಿರೇಕೋಡಿ, ಮಹಾಂತೇಶ ರಣಗಟ್ಟಿಮಠ, ಅನಿಲ ದಡ್ಡಿಮನಿ ಇತರರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.