ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 65.41 ಅಂಕಗಳನ್ನು ಪಡೆದುಕೊಂಡು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ತಿಳಿಸಿದರು.
ಶುಕ್ರವಾರ ಇಲ್ಲಿಯಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಭಾಭವನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂಡಲಗಿ ವಲಯದಲ್ಲಿ 600ಕ್ಕಿಂತ ಹೆಚ್ಚು ಅಂಕ ಪಡೆದ 129 ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಲ್ಲೋಳಿಯ ಮೊರಾರ್ಜಿ ಶಾಲೆಯ ಐಶ್ವರ್ಯ ಖಾನಟ್ಟಿ ಶೇ 99.68 ಅಂಕಗಳನ್ನು ಪಡೆದು ಚಿಕ್ಕೋಡಿ ಶೈಕ್ಷಣಿಕ ವಲಯಕ್ಕೆ ಪ್ರಥಮ ಮತ್ತು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಮಲ್ಲಾಪುರದ ಪಿಜಿ ಮೊರಾರ್ಜಿ ಶಾಲೆಯ ಚಂದ್ರಿಕಾ ಕಸ್ತೂರಿ ಶೇ 99.52 ದ್ವಿತೀಯ, ಪಾಮಲದಿನ್ನಿಯ ಸರ್ಕಾರಿ ಪ್ರೌಢಶಾಲೆಯ ಸ್ವಾತಿ ಕೋಳಿ 99.36 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ತಹಶೀಲ್ದಾರ್ ಶಿವಾನಂದ ಬಬಲಿ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ. ಚಿನ್ನನವರ, ಸಿಡಿಪಿಒ ಯಲ್ಲಪ್ಪ ಗದಾಡಿ, ಪಿಎಸ್ಐ ರಾಜು ಪೂಜೇರಿ, ಬಿಆರ್‌ಸಿ ಕಚೇರಿಯ ರೇಣುಕಾ ಆನಿ, ಸಾಯಿ ಕಾಲೇಜಿನ ಅಧ್ಯಕ್ಷ ಪುಲಕೇಶ ಸೋನವಾಲ್ಕರ, ಪ್ರಾಚಾರ್ಯರಾದ ಮಹೇಶ ಕಂಬಾರ, ಶಿವಾನಂದ ಸತ್ತಿಗೇರಿ, ರಾಘವೇಂದ್ರ ಗಂಗರಡ್ಡಿ, ಬಿಇಒ ಕಛೇರಿಯ ಸತೀಶ ಬಿ.ಎಸ್, ಟಿ.ಬಸವರಾಜ, ಆರ್.ವಿ ಯರಗಟ್ಟಿ ಮತ್ತು ಮಾರ್ಗದರ್ಶಿ ಶಿಕ್ಷಕರು, ವಿದ್ಯಾರ್ಥಿಗಳ ಪಾಲಕ ಪೋಷಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.