
ಗೋಕಾಕ: ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯತಿ ಹಾಗೂ ರಾಜ್ಯಮಟ್ಟದ ಅಧಿಕಾರಿಗಳು ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ‘ಕಾಯಕ ಗ್ರಾಮ’ದ ಕಾರ್ಯಕ್ರಮದ ಉದ್ದೇಶ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ ಹೇಳಿದರು.
ಮಂಗಳವಾರ ತಾಲ್ಲೂಕಿನ ಉದಗಟ್ಟಿ ಗ್ರಾಮದಲ್ಲಿ ಆಯೋಜಿತ “ಕಾಯಕ ಗ್ರಾಮ” ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ ಪ್ರಗತಿ ಹಾಗೂ ಗ್ರಾಮಸ್ಥರ ಕೂಂದು-ಕೊರತೆಗಳನ್ನು ಆಲಿಸಿದರು.
ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಗ್ರಾಮ ಸಭೆಯನ್ನು ಆಯೋಜಿಸಿ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಯಾವ ಯಾವ ಯೋಜನೆ ರೂಪಿಸಬೇಕೆಂದು ತೀರ್ಮಾನಿಸಿ ನಿರ್ಣಯ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುತ್ತವ್ವ ಖಾನಗೌಡರ, ಉಪಾಧ್ಯಕ್ಷ ಮುತ್ತೆಪ್ಪ ನಾಯ್ಕ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವಿನಯಕುಮಾರ ಎನ್., ಗೋಕಾಕ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.