ಸಾವು (ಪ್ರಾತಿನಿಧಿಕ ಚಿತ್ರ)
ಖಾನಾಪುರ: ಪಟ್ಟಣದ ಹೊರವಲಯದ ಪಾರಿಶ್ವಾಡ ರಸ್ತೆಯ ಕುಪ್ಪಟಗಿರಿ ಕ್ರಾಸ್ ಬಳಿ ಸೋಮವಾರ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವಾಹನ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡು, ಮತ್ತೋರ್ವ ವಾಹನ ಸವಾರ ಮೃತಪಟ್ಟಿದ್ದಾರೆ.
ತಾಲ್ಲೂಕಿನ ದೇವಲತ್ತಿ ಗ್ರಾಮದ ನಿವಾಸಿ ಸಂಜಯ ಯಳ್ಳೂರ (17) ಮೃತರು. ಗಾಯಗೊಂಡವರನ್ನು ತಾಲ್ಲೂಕಿನ ನಾಗುರ್ಡಾ ಗ್ರಾಮದ ವಿಠ್ಠಲ ಮಹಾಜನ (30) ಎಂದು ಗುರುತಿಸಲಾಗಿದೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.