ADVERTISEMENT

ಖಾನಾಪುರ | ಅಸಮರ್ಪಕ ವಿದ್ಯುತ್: ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಮೇ 2025, 16:09 IST
Last Updated 5 ಮೇ 2025, 16:09 IST
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮದ ರೈತರು ತಹಶೀಲ್ದಾರ್ ಮತ್ತು ಹೆಸ್ಕಾಂ ಅಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮದ ರೈತರು ತಹಶೀಲ್ದಾರ್ ಮತ್ತು ಹೆಸ್ಕಾಂ ಅಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು   

ಖಾನಾಪುರ: ತಾಲ್ಲೂಕಿನ ದೇವಲತ್ತಿ ಗ್ರಾಮದ ಸುತ್ತಮುತ್ತಲಿನ ಕೃಷಿ ಜಮೀನುಗಳಿಗೆ ನಿಯಮಿತವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ದೇವಲತ್ತಿ ಗ್ರಾಮದ ರೈತರು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಹೆಸ್ಕಾಂ ವಿರುದ್ಧ ಆಕ್ರೋಶ ಹೊರಹಾಕಿದರು.

ತಹಶೀಲ್ದಾರ್ ದುಂಡಪ್ಪ ಕೋಮಾರ ಮತ್ತು ಹೆಸ್ಕಾಂ ಶಾಖಾಧಿಕಾರಿ ಜಾವೇದ ನಾಯ್ಕವಾಡಿ ಅವರನ್ನುದ್ದೇಶಿಸಿ ಮಾತನಾಡಿದ ಪ್ರತಿಭಟನಕಾರರು, ‘ದೇವಲತ್ತಿ ಸುತ್ತಮುತ್ತ ನೂರಾರು ಎಕರೆ ಜಮೀನುಗಳಲ್ಲಿ ನಾವು ಕಬ್ಬು, ಹಸಿಮೆಣಸಿನಕಾಯಿ ಹಾಗೂ ವಿವಿಧ ತರಕಾರಿ ಬೆಳೆಗಳನ್ನು ಬೆಳೆದಿದ್ದೇವೆ. ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ನೀರು ಹಾಯಿಸಬೇಕಿದೆ. ಆದರೆ ಹೆಸ್ಕಾಂ ರೈತರ ಪಂಪಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಬೆಳೆಗಳು ಒಣಗುತ್ತಿವೆ’ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ಮತ್ತು ಹೆಸ್ಕಾಂ ಅಧಿಕಾರಿಗಳು, ರೈತರ ಸಮಸ್ಯೆಗೆ ಸ್ಪಂದಿಸುವುದಾಗಿ ಹೇಳಿದರು.

ADVERTISEMENT

ಮಂಜುನಾಥ ಇಟಗಿ, ಶಿವಾನಂದ ಅಗಸಿಮನಿ, ವಿಠ್ಠಲ ನಿಡಗಲಕರ, ರಮೇಶ ನಂದಿಹಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.