ಚನ್ನಮ್ಮನ ಕಿತ್ತೂರು: ಇಲ್ಲಿ ಮೂರು ದಿನ ನಡೆಯಲಿರುವ ಕಿತ್ತೂರು ಉತ್ಸವದ ಪ್ರಯುಕ್ತ ಗುರುವಾರ ಆಯೋಜಿಸಿದ್ದ ಜಾನಪದ ಕಲಾವಾಹಿನಿ ಮೆರವಣಿಗೆಗೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡಿದರು.
ರಾಣಿ ಚನ್ನಮ್ಮ ವೃತ್ತದಲ್ಲಿ ಇರುವ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಶಾಸಕರಾದ ಬಾಬಾಸಾಹೇಬ ಪಾಟೀಲ, ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಆಸಿಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿ.ಪಂ ಸಿಇಒ ರಾಹುಲ್ ಶಿಂಧೆ, ಎಸ್ಪಿ ಡಾ.ಭೀಮಾಶಂಕರ ಗುಳೇದ ಇತರರಿದ್ದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ, ಕಿತ್ತೂರಿಗೆ ಆಗಮಿಸಿದ ವೀರಜ್ಯೋತಿಯನ್ನು ಇದೇವೇಳೆ ಗಣ್ಯರು ಬರಮಾಡಿಕೊಂಡರು.
ಮಳೆ ಮಧ್ಯೆಯೂ ಮೆರವಣಿಗೆ ಆರಂಭಗೊಂಡಿದ್ದು, ರಾಜ್ಯದ ವಿವಿಧೆಡೆಯ ಕಲಾತಂಡಗಳು ನಾನಾ ಕಲಾ ಪ್ರಕಾರ ಪ್ರದರ್ಶಿಸುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.