
ಪ್ರಜಾವಾಣಿ ವಾರ್ತೆಎಂ.ಕೆ.ಹುಬ್ಬಳ್ಳಿ: ಇಲ್ಲಿನ ಬೈಲಹೊಂಗಲ ರಸ್ತೆ ಪಕ್ಕದ ಅನುಭವ ಮಂಟಪದಲ್ಲಿ ಡಿ.28ರಂದು ಚನ್ನಮ್ಮನ ಕಿತ್ತೂರು ತಾಲ್ಲೂಕು ಮಟ್ಟದ 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ.
ಬೆಳಿಗ್ಗೆ 8 ಗಂಟೆಗೆ ಸಮ್ಮೇಳನದ ಮುಖ್ಯ ವೇದಿಕೆ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರುವುದು. ಬೆಳಿಗ್ಗೆ 9ಗಂಟೆಗೆ ಪಟ್ಟಣದ ಕಲ್ಮೇಶ್ವರ ದೇವಸ್ಥಾನದಿಂದ ಆರಂಭಗೊಳ್ಳುವ ಭುವನೇಶ್ವರಿ ದೇವಿಯ ಪೂಜೆ ಹಾಗೂ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಉದ್ಘಾಟನೆಗೊಳ್ಳುವುದು. ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಸಮ್ಮೇಳನ ಅಧ್ಯಕ್ಷ ಕಾದರವಳ್ಳಿ ಸೀಮಿಮಠದ ಪಾಲಾಕ್ಷ ಶಿವಯೋಗೀಶ್ವರ ಸ್ವಾಮೀಜಿ, ಶಾಸಕ ಬಾಬಾಸಾಹೇಬ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.