ADVERTISEMENT

ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ...

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 14:34 IST
Last Updated 21 ಅಕ್ಟೋಬರ್ 2024, 14:34 IST
ಕುನಾಲ್ ಗಾಂಜಾವಾಲಾ
ಕುನಾಲ್ ಗಾಂಜಾವಾಲಾ   

ಬೆಳಗಾವಿ: ‘ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಖ್ಯಾತ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಅ.22ರಂದು ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.

ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಮತ್ತು ಜೀ ಕನ್ನಡ ಸರಿಗಮಪ ತಂಡದವರು ನೃತ್ಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.

ADVERTISEMENT

ಆಕ್ಸಿಜೆನ್ ಡ್ಯಾನ್ಸ್ ಗ್ರೂಪ್ ವತಿಯಿಂದ ನೃತ್ಯ, ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ, ಪ್ರಕಾಶ್ ಚಂದನ್ನವರ ತಂಡದಿಂದ ಜೋಗತಿ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಫೈರ್ ಶೋ ಹಾಗೂ ಶಾಡೋ ಆ್ಯಕ್ಟ್ ವಿಶೇಷ ಪ್ರದರ್ಶನ ಕೂಡ ಏರ್ಪಡಿಸಲಾಗಿದೆ.

ಎಲ್ಲರಿಗೂ ಉಚಿತ ಪ್ರವೇಶವಿದೆ. ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.

ಸಾಧು ಕೋಕಿಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.