ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಅಕ್ಟೋಬರ್ 23ರಿಂದ 25ರವರೆಗೆ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಕಿತ್ತೂರು ಪಟ್ಟಣವನ್ನು ಸ್ವಾಗತ ಕಮಾನು ಮತ್ತು ವಿದ್ಯುದ್ದೀಪಗಳಿಂದ ಸಿಂಗರಿಸಲಾಗಿದೆ.
ಬುಧವಾರ ಬೆಳಿಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿಜಯ ಜ್ಯೋತಿ ಸ್ವಾಗತಿಸುವರು. 10.15ಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಾನಪದ ಮೆರವಣಿಗೆಗೆ ಚಾಲನೆ ನೀಡುವರು. ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಉತ್ಸವ ಉದ್ಘಾಟಿಸುವರು.
ಅಕ್ಟೋಬರ್ 25ರಂದು ರಾತ್ರಿ 8ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳುವರು.
ಫಲ–ಪುಷ್ಪ ಪ್ರದರ್ಶನ, ವಸ್ತುಪ್ರದರ್ಶನ, ಆರೋಗ್ಯ ಮೇಳ, ಕ್ರೀಡೆ ಮತ್ತು ದೋಣಿ ವಿಹಾರ, ಜಲಸಾಹಸ ಕ್ರೀಡೆ, ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಕುಸ್ತಿ, ಮಹಿಳೆಯರಿಗೆ ಪ್ರತ್ಯೇಕವಾಗಿ ವಿವಿಧ ಸ್ಪರ್ಧೆ ನಡೆಯಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.