ADVERTISEMENT

ಶುದ್ಧ ಸಂಕಲ್ಪ, ಬದ್ಧತೆಯಿಂದ ಪ್ರಗತಿ ಸಾಧ್ಯ: ಡಾ.ಬಸವರಾಜ ಜಗಜಂಪಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 17:00 IST
Last Updated 13 ನವೆಂಬರ್ 2020, 17:00 IST
ಬೆಳಗಾವಿಯ ಲಿಂಗರಾಜ ಕಾಲೇಜಿನಲ್ಲಿ ಶುಕ್ರವಾರ ನಡೆದ ಕೆಎಲ್ಇ ಸಂಸ್ಥೆಯ 105ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಬಸವರಾಜ ಜಗಜಂಪಿ ಮಾತನಾಡಿದರು
ಬೆಳಗಾವಿಯ ಲಿಂಗರಾಜ ಕಾಲೇಜಿನಲ್ಲಿ ಶುಕ್ರವಾರ ನಡೆದ ಕೆಎಲ್ಇ ಸಂಸ್ಥೆಯ 105ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಬಸವರಾಜ ಜಗಜಂಪಿ ಮಾತನಾಡಿದರು   

ಬೆಳಗಾವಿ: ‘ಶುದ್ಧ ಸಂಕಲ್ಪ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಿದರೆ ಪ್ರಗತಿ ಸಾಧ್ಯ’ ಎಂದು ಸಾಹಿತಿ ಡಾ.ಬಸವರಾಜ ಜಗಜಂಪಿ ಹೇಳಿದರು.

ಇಲ್ಲಿನ ಲಿಂಗರಾಜ ಕಾಲೇಜಿನಲ್ಲಿ ಶುಕ್ರವಾರ ನಡೆದ ಕೆಎಲ್ಇ ಸಂಸ್ಥೆಯ 105ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇತಿಹಾಸವನ್ನು ತಿಳಿದವರು ಮಾತ್ರ ಇತಿಹಾಸ ನಿರ್ಮಿಸಲು ಸಾಧ್ಯ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಮಾತ್ರವೇ ಯಶಸ್ಸನು ಪಡೆಯಬಹುದು. ಕೆಎಲ್‌ಇ ಸಂಸ್ಥೆಯನ್ನು ಸ್ಥಾಪಿಸಿದಂತಹ ಸಪ್ತಋಷಿಗಳ ಕಾರ್ಯ ದಕ್ಷತೆ ಮತ್ತು ಅವರ ನಿಸ್ವಾರ್ಥ ಸೇವೆ ಮಾದರಿಯಾಗಿದೆ. ಪ್ರಸ್ತುತ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಕಠಿಣ ಪರಿಶ್ರಮದಿಂದಾಗಿ ಇಂದು ಸಂಸ್ಥೆ ದೇಶದಾದ್ಯಂತ ತನ್ನ ಶಾಖೆ ವಿಸ್ತರಿದೆ. ಸಪ್ತಋಷಿಗಳು ನೀಡಿದ ಬೆಳಕನ್ನು ಇಂದಿನ ಯುವ ಜನತೆ ತಮ್ಮ ದಾರಿದೀಪನ್ನಾಗಿಸಿಕೊಂಡು ಜೀವನದಲ್ಲಿ ಅಭಿವೃದ್ಧಿ ಕಾಣಬೇಕು’ ಎಂದರು.

ADVERTISEMENT

ಪ್ರಾಚಾರ್ಯ ಡಾ.ಆರ್.ಎಂ. ಪಾಟೀಲ ಮಾತನಾಡಿದರು ಲಕ್ಷ್ಮಿ ಶಿವಣ್ಣವರ ಹಾಗೂ ಸಂಗಡಿಗರು ಪಾರ್ಥನಾ ಗೀತೆ ಪ್ರಸ್ತುತಪಡಿಸಿದರು. ಪಿಯುಸಿ ವಿಭಾಗದ ಪ್ರಾಚಾರ್ಯೆ ಗಿರಿಜಾ ಹಿರೇಮಠ ಸ್ವಾಗತಿಸಿದರು. ಡಾ.ಮಹೇಶ ಗುರನಗೌಡರ ನಿರೂಪಿಸಿದರು. ಜೆ.ಎ. ಮಠಪತಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.