ADVERTISEMENT

ಕೆಎಲ್‌ಇ ಆಸ್ಪತ್ರೆ: ಎಲ್ಲ ಚಿಕಿತ್ಸೆ ಲಭ್ಯ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 12:55 IST
Last Updated 12 ಜನವರಿ 2021, 12:55 IST

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಈ ಭಾಗದಲ್ಲಿ ಎಲ್ಲ ರೀತಿಯ ವೈದ್ಯಕೀಯ ಹಾಗೂ ಶಸ್ತ್ರಚಿಕಿತ್ಸಾ ಸೇವೆ ಕಲ್ಪಿಸುತ್ತಿದೆ.

‘ಪ್ರಸ್ತುತ ಆಸ್ಪತ್ರೆಯಲ್ಲಿ ಕೋವಿಡ್–19 ರೋಗಿಗಳು ದಾಖಲಾಗಿಲ್ಲ. ಎಲ್ಲ ರೀತಿಯ ಚಿಕಿತ್ಸೆಯನ್ನು ಎಂದಿನಂತೆ ಒದಗಿಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಸಮಗ್ರವಾಗಿ ತಪಾಸಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ವೈದ್ಯಕೀಯ ನಿರ್ದೇಶಕರು ಹಾಗೂ ಸಿಇಒ ಡಾ.ಎಂ.ವಿ. ಜಾಲಿ ತಿಳಿಸಿದ್ದಾರೆ.

‘ಮಧುಮೇಹ ನ್ಯೂನತೆ, ಮೂತ್ರಕೋಶ, ಹೃದ್ರೋಗ, ಹೃದಯ ಶಸ್ತ್ರಚಿಕಿತ್ಸೆ, ಮೂತ್ರಪಿಂಡ, ಮೂತ್ರಕೋಶ, ಗ್ಯಾಸ್ಟ್ರೋಎಂಟ್ರಾಲಾಜಿ, ಹೆರಿಗೆ ಮತ್ತು ಸ್ತ್ರೀರೋಗ, ನೇತ್ರ, ಚಿಕ್ಕಮಕ್ಕಳ ಚಿಕಿತ್ಸೆ, ಸಾಮಾನ್ಯ ಕಾಯಿಲೆ, ಶ್ವಾಸಕೋಶ, ಕಿವಿ, ಮೂಗು, ಗಂಟಲು, ಕ್ಯಾನ್ಸರ್ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಅಲ್ಲದ ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹಿಂಜರಿಯಬಾರದು. ಹೆಚ್ಚಿನ ಮಾಹಿತಿಗೆ ದೂ: 0831-2551116/7 ಸಂಪರ್ಕಿಸಬಹುದು’ ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.