
ಪ್ರಜಾವಾಣಿ ವಾರ್ತೆಜೈ ಮಹಾರಾಷ್ಟ್ರ ಸ್ಟಿಕ್ಕರ್ ಅಂಟಿಸುತ್ತಿರುವ ಶಿವಸೇನಾ ಕಾರ್ಯಕರ್ತರು
–ಪ್ರಜಾವಾಣಿ ಚಿತ್ರ
ಬೆಳಗಾವಿ: ಇಲ್ಲಿ ಮಹಾಮೇಳಾವ್ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ ನಿಷೇಧ ಹೇರಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೊಲ್ಹಾಪುರ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರ ತಡೆದು, 'ಜೈ ಮಹಾರಾಷ್ಟ್ರ' ಸ್ಟಿಕ್ಕರ್ ಅಂಟಿಸಿದರು.
ಪುಣೆಯಿಂದ ಹಳಿಯಾಳಕ್ಕೆ ಬಸ್ ಬಸ್ ಹೊರಟಿತ್ತು. ಶಿವಸೇನೆಯ ಉದ್ದವ್ ಠಾಕ್ರೆ ಬಣದ ಕಾರ್ಯಕರ್ತರು ಈ ಪುಂಡಾಟಿಕೆ ಮೆರೆದಿದ್ದಾರೆ.