ಬೆಳಗಾವಿ: ಬೆಂಗಳೂರಿನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಎಚ್.ಡಿ.ದೇವೇಗೌಡ ಅಭಿನಂದನಾ ಸಮಿತಿಯು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ‘ಶ್ರೀ ಎಚ್.ಡಿ.ದೇವೇಗೌಡ ಪ್ರಶಸ್ತಿ’ ನೀಡಿ ಗೌರವಿಸಿತು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ 93 ವರ್ಷ ಪೂರೈಸಿ, ಅಭಿಮಾನಿಗಳಿಂದ ‘ಗಂಗ ಸಾಮ್ರಾಟ ಶ್ರೀಪುರುಷ’ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ವಿವಿಧ ರಂಗಗಳಲ್ಲಿ ಸಾಧನೆಗೈದ 93 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಭಾಕರ ಕೋರೆ ಅವರು ಶಿಕ್ಷಣ, ಕೃಷಿ, ಸಹಕಾರ, ರಾಜಕೀಯ, ಸಮುದಾಯದ ಕ್ಷೇಮಾಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಿದ ಕೆಎಲ್‌ಇ ಸಂಸ್ಥೆಯ ಹೆಸರನ್ನು ಇಡೀ ವಿಶ್ವದಲ್ಲಿ ಪ್ರಸಿದ್ಧಿಗೊಳಿಸಿದ್ದಾರೆ.
ಈ ಪ್ರಶಸ್ತಿಗೆ ಕೆಎಲ್‌ಇ ಆಡಳಿತ ಮಂಡಳಿ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.