ಕೌಜಲಗಿ: ‘ಉಚಿತ ಯೋಜನೆಗಳಿಂದ ತಂಗುದಾಣಗಳನ್ನು ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹಾಗಾಗಿ, ಸಂಸದರ ನಿಧಿಯಡಿ ತಂಗುದಾಣಗಳನ್ನು ನಿರ್ಮಿಸಲಾಗುತ್ತಿದೆ’ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಹೇಳಿದರು.
ಹೋಬಳಿಯ ಕಳ್ಳಿಗುದ್ದಿ, ಮನ್ನಿಕೇರಿ, ಬಗರನಾಳ, ಗೋಸಬಾಳ ಗ್ರಾಮಗಳಲ್ಲಿ ತಂಗುದಾಣ ನಿರ್ಮಾಣಕ್ಕೆ ಭೂಮಿಪೂಜೆ ನೇರವೇರಿಸಿ ಮಾತನಾಡಿದರು.
‘ಸಂಸದರ ನಿಧಿ ಮೂಲಕ ಸ್ಮಾರ್ಟ್ ಕ್ಲಾಸ್, ಜಿಮ್, ಆಂಬುಲೆನ್ಸ್, ಸಮುದಾಯ ಭವನ, ರಂಗ ಮಂದಿರ ಮೊದಲಾದ ಸೌಕರ್ಯ ಒದಗಿಸಲಾಗಿದೆ’ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ ಚನ್ನಾಳ, ಎಲ್.ಆರ್. ಕಮಲದಿನ್ನಿ, ಎಲ್.ಆರ್. ಸಂತ್ರಿ, ಲಕ್ಷ್ಮಣ ಹಿರಡ್ಡಿ, ಹನುಮಂತ ಹಿರಡ್ಡಿ, ಭೀಮಶೆಪ್ಪ ಸಿಂತ್ರಿ, ಸಿದ್ದಪ್ಪ ಬಿಸಗುಪ್ಪಿ, ಬಸವರಾಜ ಗಾಡವಿ, ಬಸವರಾಜ ಅಂಗಡಿ, ಯಲ್ಲಪ್ಪ ನಾಯ್ಕರ, ಮಹಾಂತೇಶ ದಳವಾಯಿ, ಮುತ್ತೆಪ್ಪ ನಾಂವಿ, ಮಹಾಂತೇಶ ಹಿರೇಮಠ, ವಿಠ್ಠಲ ನಾಯ್ಕರ, ಹಣಮಂತ ಗಡಾದ, ಬಗರನಾಳ ಬಸಪ್ಪ ಗೌಡರ, ರಾಮಪ್ಪ ತೋಟಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.