ಕೌಜಲಗಿ: ಪಟ್ಟಣದಲ್ಲಿ ಮಂಗಳವಾರ 24ರಂದು ಬೆಳಿಗ್ಗೆ 11 ಗಂಟೆಗೆ ಯಲ್ಲಮ್ಮದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ ಎಂದು ಕೌಜಲಗಿ ಯಲ್ಲಮ್ಮದೇವಿ ಸದ್ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಯಲ್ಲಮ್ಮದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೇಮುಲ್ ಅಧ್ಯಕ್ಷರು ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಹಿಸಲಿದ್ದಾರೆ. ಉದ್ಘಾಟನೆಯನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೆರವೇರಿಸಲಿದ್ದು, ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ, ಕೌಜಲಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಮುಖಂಡರಾದ ರವಿ ಪರುಶೆಟ್ಟಿ, ಕೌಜಲಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪರಮೇಶ್ವರ ಹೊಸಮನಿ, ಎಂ.ಎನ್. ಶಿವನಮಾರಿ, ಕೌಜಲಗಿ ಗ್ರಾಮ ಅಧ್ಯಕ್ಷೆ ಯಲ್ಲವ್ವ ಈಟಿ, ಕೌಜಲಗಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಶಾಂತಪ್ಪ ಹಿರೇಮೇತ್ರಿ ಪಾಲ್ಗೊಳ್ಳಲಿದ್ದಾರೆ.
ಯಲ್ಲಮ್ಮ ದೇವಿಯ ಶಿಲಾಮೂರ್ತಿಯು ಪಟ್ಟಣದ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.